ಅಹಮದಾಬಾದ್: ಗುಜರಾತಿನ ಭರೂಚ್ ನಗರದ ಪಟೇಲ್ ವೆಲ್ಫೇರ್ ಆಸ್ಪತ್ರೆಯ ಕೋವಿಡ್–19 ತೀವ್ರ ನಿಗಾ ಘಟಕದಲ್ಲಿ (ಐಸಿಯು) ಶುಕ್ರವಾರ ತಡರಾತ್ರಿ ನಡೆದ ಅಗ್ನಿ ದುರಂತದಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಐಸಿಯುನಲ್ಲಿ ಶುಕ್ರವಾರ ಮಧ್ಯರಾತ್ರಿಯ ಹೊತ್ತಿಗೆ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ’ ಎಂದು ಭರೂಚ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ವಿ. ಚುಡಾಸಮಾ ಅವರು ಮಾಹಿತಿ ನೀಡಿದ್ದಾರೆ.

‘ಬೆಂಕಿಯು ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸಿಕೊಂಡಿದ್ದರಿಂದ ಸಾಕಷ್ಟು ಅವ್ಯವಸ್ಥೆ ಉಂಟಾಯಿತು. ಆಸ್ಪತ್ರೆಯ ಸಿಬ್ಬಂದಿ ನನ್ನ ಕುಟುಂಬದ ಸದಸ್ಯರನ್ನು ವಾರ್ಡಿನಿಂದ ಹೊರಗೆ ಕರೆದೊಯ್ದರು. ಬಳಿಕ ಅವರನ್ನು ನಾವು ಬೇರೆ ಆಸ್ಪತ್ರೆಗೆ ದಾಖಲಿಸಿದೆವು. ಘಟನೆಯಲ್ಲಿ ಕೋವಿಡ್ ಪೀಡಿತರಾಗಿದ್ದ ನನ್ನ ಇಬ್ಬರು ಸಂಬಂಧಿಕರು ಪಾರಾಗಿದ್ದಾರೆ’ ಎಂದು ಪಾರ್ಥ್ ಗಾಂಧಿ ಎನ್ನುವವರು ತಿಳಿಸಿದರು.

‘ಭರೂಚ್ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಪ್ರಾಣಹಾನಿಯಾಗಿರುವುದು ನೋವಿನ ಸಂಗತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.