ನವದೆಹಲಿ: ದೇಶದ ಉತ್ತರ ಮತ್ತು ದಕ್ಷಿಣ ಭಾಗದಲ್ಲಿನ ವೈದ್ಯಕೀಯ ಕಾಲೇಜುಗಳ ಸಂಖ್ಯೆಯಲ್ಲಿರುವ ಅಂತರ ಕಡಿಮೆ ಮಾಡುವ ಉದ್ದೇಶದಿಂದ ಯೋಜನಾ ಆಯೋಗ ರಚಿಸಿದ್ದ ತಜ್ಞರ ಸಮಿತಿಯು, 187 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಶಿಫಾರಸು ಮಾಡಿದೆ.

ಇನ್ನು 10 ವರ್ಷಗಳಲ್ಲಿ ಸ್ಥಾಪನೆಯಾಗಲಿರುವ ಈ ಕಾಲೇಜುಗಳ ಪೈಕಿ ಹೆಚ್ಚಿನವುಗಳನ್ನು ಉತ್ತರ ಭಾರತದ ಏಳು ರಾಜ್ಯಗಳಲ್ಲಿ ಸ್ಥಾಪಿಸಲಾಗುತ್ತದೆ. ಈಗ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳು ಇವೆ.

ಅಧಿಕ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರದಲ್ಲಿ ಕಡಿಮೆ ಕಾಲೇಜುಗಳಿವೆ.
`15 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಶಿಫಾರಸು ಮಾಡಲಾಗಿದೆ~ ಎಂದು ತಜ್ಞರ ಸಮಿತಿಯ ಮುಖ್ಯಸ್ಥ ಕೆ.ಶ್ರೀಕಾಂತ್ ರೆಡ್ಡಿ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.
ವೈದ್ಯಕೀಯ ಕಾಲೇಜುಗಳ ಪ್ರಾದೇಶಿಕ ಅಸಮತೋಲನದಿಂದಾಗಿ ಅಗತ್ಯ ವೈದ್ಯರ ಕೊರತೆ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಹೊಸ ಕಾಲೇಜುಗಳಿಗೆ ಪ್ರಾಧ್ಯಾಪಕರ ಕೊರತೆ, ಸೌಲಭ್ಯಗಳ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ಈ ಕಾಲೇಜುಗಳನ್ನು ಜಿಲ್ಲಾ ಆಸ್ಪತ್ರೆಗಳ ಜತೆ ಸಂಯೋಜಿಸಬೇಕು ಎಂದು ಸಲಹೆ ಮಾಡಲಾಗಿದೆ.
58 ನರ್ಸಿಂಗ್ ಕಾಲೇಜುಗಳು, 382 ನರ್ಸಿಂಗ್ ಶಾಲೆಗಳು ಮತ್ತು 232 ದಾದಿಯರ ತರಬೇತಿ ಸಂಸ್ಥೆಗಳನ್ನು ತೆರೆಯಲು ಶಿಫಾರಸು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.