ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಸೆವಾಲಾ ದೇಹ ಹೊಕ್ಕಿದ್ದವು 19 ಗುಂಡುಗಳು

Last Updated 2 ಜೂನ್ 2022, 16:20 IST
ಅಕ್ಷರ ಗಾತ್ರ

ಚಂಡೀಗಡ: ಹಂತಕರ ಗುಂಡೇಟುಗಳಿಂದ ಹತ್ಯೆಗೊಳಗಾದ ಪಂಜಾಬ್‌ನ ಜನಪ್ರಿಯ ಗಾಯಕ ಸಿಧು ಮೂಸೆವಾಲಾ ಅವರ ದೇಹದೊಳಗೆ 19 ಗುಂಡುಗಳು ಹೊಕ್ಕಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಕಂಡುಬಂದಿದೆ.

ಸಿಧು ಅವರ ದೇಹದ ಬಲ ಭಾಗಕ್ಕೆ ಹೆಚ್ಚಿನ ಗುಂಡುಗಳು ಹೊಕ್ಕಿವೆ. ಗುಂಡುಗಳು ಅವರ ದೇಹ ಹೊಕ್ಕಿದ ಕೇವಲ 15 ನಿಮಿಷಗಳ ಅವಧಿಯಲ್ಲಿ ಅವರ ಜೀವ ಹಾರಿಹೋಗಿರುವ ಸಾಧ್ಯತೆ ಇದೆ ಎಂದು ಐವರು ವೈದ್ಯರ ತಂಡ ನಡೆಸಿದ ಮರಣೋತ್ತರ ಪರೀಕ್ಷಾ ವರದಿ ಹೇಳಿದೆ.

ಪಂಜಾಬ್‌ನ ಆಮ್‌ ಆದ್ಮಿಸರ್ಕಾರವು ಗಣ್ಯ ವಕ್ತಿಗಳಿಗೆ ನೀಡಿದ್ದಭದ್ರತೆ ವಾಪಸ್‌ ಪಡೆದ ಮರು ದಿನವೇಮೇ 29ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಮೂಸೆವಾಲಾ ಅವರ ಕಾರನ್ನು ಅಡ್ಡಗಟ್ಟಿ ಗುಂಡಿನ ಸುರಿಮಳೆ ಗರೆದು ಪರಾರಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT