1947ರ ದೇಶ ವಿಭಜನೆಯ ವರ್ಷಾಚರಣೆಯ ಸಂದರ್ಭದಲ್ಲಿ ಮೃತಪಟ್ಟವರಿಗೆ ಅಮಿತ್ ಶಾ ಶ್ರದ್ಧಾಂಜಲಿ ಸಲ್ಲಿಸಿದರು.
ವಿಭಜನೆಯ ಸಂದರ್ಭದಲ್ಲಿ ನಡೆದ ಗಲಭೆಗಳಲ್ಲಿ ಲಕ್ಷಾಂತರ ಜನರು ಸ್ಥಳಾಂತರಗೊಂಡರು ಮತ್ತು ಸಾಕಷ್ಟು ಪ್ರಮಾಣದಲ್ಲಿ ಸಾವು– ನೋವು ಸಂಭವಿಸಿತ್ತು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಇತಿಹಾಸದ ಈ ಕರಾಳ ದಿನದಂದು ನೂರಾರು ನೆನಪುಗಳು ನಮ್ಮನ್ನು ಕಾಡುತ್ತವೆ. ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರು ಹಾಗೂ ನಿರಾಶ್ರಿತರಾದ ಲಕ್ಷಾಂತರ ಜನರಿಗೆ ನನ್ನ ನಮನಗಳು. ಇತಿಹಾಸವನ್ನು ನನೆನಪಿಸಿಕೊಳ್ಳುವ ದೇಶವು ಅತ್ಯಂತ ಶಕ್ತಿಶಾಲಿಯಾಗಿ ಹೊರಹೊಮ್ಮುತ್ತದೆ’ ಎಂದು ತಿಳಿಸಿದ್ಧಾರೆ.