ನವದೆಹಲಿ: ಸಿಖ್ ವಿರೋಧಿ ಗಲಭೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವೊಂದು ಸಾಕ್ಷಿಯೊಬ್ಬರ ಹೇಳಿಕೆಯನ್ನು ಗುರುವಾರ ದಾಖಲಿಸಿಕೊಂಡಿತು.

ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ವಿಧಿವಿಜ್ಞಾನ ತಜ್ಞ ಎಸ್.ಇಂಗರಸಾಲ್ ಅವರ ಹೇಳಿಕೆ ದಾಖಲಿಸಿಕೊಂಡರು. ಇಂಗರಸಾಲ್ ಅವರನ್ನು ಪಾಟಿ ಸವಾಲಿಗೆ ಒಳಪಡಿಸುವ ಸಂಬಂಧ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿ ಆದೇಶಿಸಿದರು.

ಟೈಟ್ಲರ್ ಅವರು ಪ್ರವಾಸ ಕೈಗೊಂಡಿರುವ ಕಾರಣ, ಅವರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ನ್ಯಾಯಾಲಯ ವಿನಾಯಿತಿ ನೀಡಿದೆ.

1984ರಲ್ಲಿ ದೆಹಲಿಯಲ್ಲಿ ನಡೆದಿದ್ದ ಸಿಖ್ ವಿರೋಧಿ ಗಲಭೆಗಳಲ್ಲಿ, ಪೂಲ್ ಬಂಗಶ್ ಬಳಿಯ ಗುರುದ್ವಾರದಲ್ಲಿ ಮೂವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಟೈಟ್ಲರ್ ಆರೋಪಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.