ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಡಾನನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಅರ್ಜಿ

Published 1 ಮಾರ್ಚ್ 2024, 15:45 IST
Last Updated 1 ಮಾರ್ಚ್ 2024, 15:45 IST
ಅಕ್ಷರ ಗಾತ್ರ

ನವದೆಹಲಿ: 1993ರ ಸರಣಿ ಬಾಂಬ್‌ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು ದೋಷಮುಕ್ತಗೊಳಿಸಿರುವ ಅಜ್ಮೇರ್ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

‘ಪ್ರಕರಣದಲ್ಲಿ 12 ಜನ ಆರೋಪಿಗಳಿದ್ದು, ಪ್ರಕರಣದ ಕುರಿತು ಗುರುವಾರ ತೀರ್ಪು ನೀಡಿದ ಟಾಡಾ ನ್ಯಾಯಾಲಯದ ನ್ಯಾಯಾಧೀಶರಾದ ಮಹಾವೀರ್‌ ಪ್ರಸಾದ್‌ ಗುಪ್ತಾ ಅವರು ಅದರಲ್ಲಿ ಇಬ್ಬರಿಗೆ  ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಆದರೆ ಪ್ರಮುಖ ಆರೋಪಿ ತುಂಡಾನನ್ನು ದೋಷಮುಕ್ತಗೊಳಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1993 ರಲ್ಲಿ ಲಖನೌ, ಕಾನ್ಪುರ, ಹೈದರಾಬಾದ್‌, ಸೂರತ್‌ ಮತ್ತು ಮುಂಬೈ ನಗರಗಳಲ್ಲಿ ಸರಣಿ ಬಾಂಬ್‌ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿದ್ದರು, ಬಾಬ್ರಿ ಮಸೀದಿ ಧ್ವಂಸಗೊಂಡು ಒಂದು ವರ್ಷ ಪೂರ್ಣಗೊಂಡ ದಿನದಂದೇ ಸರಣಿ ಸ್ಫೋಟ ನಡೆದಿತ್ತು.

ಪ್ರಕರಣದ ತನಿಖೆ ನಡೆಸಿದ ಸಿಬಿಐ 21 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ 15 ಜನ ಆರೋಪಿಗಳಿಗೆ ಟಾಡಾ ನ್ಯಾಯಾಲಯ 2004ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ ಕೂಡಾ ಎತ್ತಿ ಹಿಡಿದಿತ್ತು.

ದಾವೂದ್‌ ಇಬ್ರಾಹಿಂ ಆಪ್ತನಾಗಿರುವ ತುಂಡಾ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಆತನನ್ನು 2013ರಲ್ಲಿ ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT