ಮುಂಬೈ: ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಿದ್ದ ಮುಂಬೈ ಪೊಲೀಸರು ಬಳಿಕ ಬಿಡುಗಡೆಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕೊಲಬಾ ಪ್ರದೇಶದ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದ ಪೊಲೀಸರು ಬಳಿಕ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದರು.

ಯುವಕರಿಬ್ಬರು ತಮ್ಮ 'ಇನ್‌ಸ್ಟಾಗ್ರಾಮ್ ಸ್ಟೋರಿ' ಸ್ಟೇಟಸ್‌ನಲ್ಲಿ ಪಾಕಿಸ್ತಾನದ ಧ್ವಜದ ವಿಡಿಯೊವನ್ನು ಪೋಸ್ಟ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವ ಸಾಧ್ಯತೆಯಿದೆ ಎಂದು ಕೊಲಬಾ ಮೂಲದ ಉದ್ಯಮಿಯೊಬ್ಬರು ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಭಯೋತ್ಪಾದನಾ ವಿರೋಧಿ ಪಡೆ (ಎಟಿಎಸ್), ಯುವಕರನ್ನು ಸಿಆರ್‌ಪಿಸಿ ಸೆಕ್ಷನ್ 151 (3) ಅಡಿಯಲ್ಲಿ ಬಂಧಿಸಿದ್ದರು.

ಆಕ್ಷೇಪಾರ್ಹ ವಿಡಿಯೊಗಳನ್ನು ಮೊಬೈಲ್ ಫೋನ್‌ನಿಂದ ಅಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.