ರಾಯಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಸಶಸ್ತ್ರ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.
.Chhattisgarh Election | 8 ನಕ್ಸಲ್ ಎನ್ಕೌಂಟರ್ಗಳು, 1 ಕಚ್ಚಾ ಬಾಂಬ್ ಸ್ಫೋಟ.
ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತೆಕಲ್‌ಗುಡೆಮ್ ಎಂಬಲ್ಲಿ ಈ ಘಟನೆ ಜರುಗಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್‌ಸ್ಪೆಕ್ಟರ್ ಸುಂದರ್‌ರಾಜ್ ತಿಳಿಸಿದ್ದಾರೆ.

ಸುಖ್ಮಾ ಹಾಗೂ ಬಿಜಾಪುರ ಜಿಲ್ಲೆಯ ಗಡಿಯಲ್ಲಿ ಈ ಗ್ರಾಮ ಇದೆ.
.ನಕ್ಸಲ್ ಉಪಟಳ ನಿಯಂತ್ರಿಸುವಲ್ಲಿ ಕೇಂದ್ರದ ಪಾತ್ರ ಶೂನ್ಯ: ಭೂಪೇಶ್ ಬಘೆಲ್.
ಕೋಬ್ರಾ ಪಡೆಯ 201 ಬೆಟಾಲಿಯನ್ ಹಾಗೂ ಸಿಆರ್‌ಪಿಎಫ್‌ನ 150 ಬೆಟಾಲಿಯನ್ ತಂಡಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಮಧ್ಯಾಹ್ನ ಸುಮಾರು 1 ಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ.

ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗಿದೆ. ಭದ್ರತಾ ಪಡೆಗಳು ಪ್ರತ್ಯುತ್ತರ ನೀಡುತ್ತಿವೆ ಎಂದು ಮೂಲಗಳು ತಿಳಿಸಿವೆ.
.ನಕ್ಸಲ್ ಹಿಂಸಾಚಾರ ಶೇ 77 ರಷ್ಟು ಕಡಿಮೆಯಾಗಿದೆ: ಕೇಂದ್ರ ಸರ್ಕಾರ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.