ಫತೇಪುರ: ಉತ್ತರ ಪ್ರದೇಶ ಫತೇಪುರ ಜಿಲ್ಲೆಯ ಅಸೋತರ್ ಎಂಬಲ್ಲಿನ ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರನ್ನು ಕೊಲ್ಲಲಾಗಿದೆ. ಅವರ ದೇಹಗಳನ್ನು ಕೊಳದಲ್ಲಿ ಎಸೆಯಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

'ಇಬ್ಬರೂ ಹೆಣ್ಣುಮಕ್ಕಳು ಗ್ರಾಮದ ದಿಲೀಪ್ ಧೋಬಿಎಂಬುವರ ಪುತ್ರಿಯರಾದ ಸುಮಿ (12) ಮತ್ತು ಕಿರಣ್ (8) ಎಂದು ಗುರುತಿಸಲಾಗಿದೆ. ಬಾಲಕಿಯರ ಕಣ್ಣುಗಳ ಬಳಿ ಗಾಯದ ಗುರುತುಗಳು ಕಂಡು ಬಂದಿದೆ. ಸೋಮವಾರ ಸಂಜೆ ಹೊತ್ತಿಗೆ ಅವರ ದೇಹಗಳನ್ನು ಕೊಳದಿಂದ ಹೊರತೆಗೆಯಲಾಯಿತು,' ಎಂದು ಎಎಸ್ಪಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಸೋದರಿಯರು ತರಕಾರಿ ತರಲೆಂದು ಭಾನುವಾರ ತೋಟಕ್ಕೆ ತೆರಳಿದ್ದರು. ಆದರೆ, ಅವರು ಮನೆಗೆ ವಾಪಸ್ ಬಂದಿರಲಿಲ್ಲ.

ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಂತರದುಷ್ಕರ್ಮಿಗಳು ಕೊಂದಿದ್ದಾರೆ ಎಂದು ಸಂತ್ರಸ್ತ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.