ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರ ಹತ್ಯೆ

ಬಿಜಾಪುರ, ಬಾಲ್ಗಾಟ್ ಜಿಲ್ಲೆಯಲ್ಲಿ ಎನ್‌ಕೌಂಟರ್‌
Published 2 ಏಪ್ರಿಲ್ 2024, 5:49 IST
Last Updated 2 ಏಪ್ರಿಲ್ 2024, 5:49 IST
ಅಕ್ಷರ ಗಾತ್ರ

ರಾಯಪುರ: ನಿನ್ನೆ ರಾತ್ರಿ ಹಾಗೂ ಇಂದು ಬೆಳಿಗ್ಗೆ ನಡೆದ ಎರಡು ಪ್ರತ್ಯೇಕ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಹತರಾಗಿದ್ದಾರೆ.

ಛತ್ತೀಸಗಢದ ಬಸ್ತಾರ್ ವಲಯದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಸ್ಥಳೀಯ ಪೊಲೀಸರು ಹಾಗೂ ಸಿಆರ್‌ಪಿಎಫ್‌ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಸಾಯಿಸಲಾಗಿದೆ.

ಗಂಗಲೂರು ಪೊಲೀಸ್ ಠಾಣೆಯ ಲೆಂದ್ರಾ ಎಂಬ ಹಳ್ಳಿಯ ಅರಣ್ಯದಲ್ಲಿ ಈ ಘಟನೆ ನಡೆದಿದೆ.

ಸ್ಥಳದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಬಸ್ತಾರ್ ಐಜಿಪಿ ಪಿ. ಸುಂದರರಾಜ್ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಇಬ್ಬರ ಹತ್ಯೆ

ಬಾಲ್ಗಾಟ್: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ನಕ್ಸಲರನ್ನು ಸೋಮವಾರ ರಾತ್ರಿ ಮಧ್ಯಪ್ರದೇಶದ ಬಾಲ್ಗಾಟ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರು ಹತ್ಯೆ ಮಾಡಿದ್ದಾರೆ.

ಮೃತರನ್ನು ಸಾಜಂತಿ ಅಲಿಯಾಸ್ ಕ್ರಾಂತಿ ಹಾಗೂ ಶೇರ್ ಇಂಗ್ ಎಂದು ಗುರುತಿಸಲಾಗಿದೆ.

ಮೃತ ನಕ್ಸಲ್‌ರಿಂದ ಶಸ್ತಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT