ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎನ್‌ಎಲ್‌ಡಿ ಮುಖಂಡ ರಾಠೀ ಹತ್ಯೆ ಪ್ರಕರಣ: ಇಬ್ಬರ ಬಂಧನ

Published 4 ಮಾರ್ಚ್ 2024, 13:47 IST
Last Updated 4 ಮಾರ್ಚ್ 2024, 13:47 IST
ಅಕ್ಷರ ಗಾತ್ರ

ಚಂಡೀಗಢ/ನವದೆಹಲಿ: ಐಎನ್‌ಎಲ್‌ಡಿ ಹರಿಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್ ರಾಠೀ ಹತ್ಯೆಗೆ ಸಂಬಂಧಿಸಿದಂತೆ ಗೋವಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಝಜ್ಜರ್ ಜಿಲ್ಲೆಯ ಬಹದ್ದೂರ್‌ಗಡದಲ್ಲಿ ಫೆ.25ರಂದು ಆರೋಪಿಗಳು ರಾಠೀ ಮತ್ತು ಐಎನ್‌ಎಲ್‌ಡಿ ಕಾರ್ಯಕರ್ತ ಜೈಕಿಶನ್‌ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಿದ್ದರು.

ಹರಿಯಾಣ ಪೊಲೀಸ್‌ನ ವಿಶೇಷ ಟಾಸ್ಕ್ ಫೋರ್ಸ್, ಜಿಲ್ಲಾ ಪೊಲೀಸರು ಹಾಗೂ ದೆಹಲಿ ಪೊಲೀಸ್‌ನ ವಿಶೇಷ ಘಟಕದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಗೋವಾದ ಹೋಟೆಲ್‌ನಲ್ಲಿ ತಂಗಿದ್ದ ಆರೋಪಿಗಳಾದ ಆಶೀಶ್‌ ಮತ್ತು ಸೌರಭ್‌ನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ರಾಠೀ ವಾಹನದ ಮೇಲೆ ಆಶೀಶ್‌, ಸೌರಭ್, ನಕುಲ್, ಅತುಲ್ ಗುಂಡಿನ ಮಳೆಗರೆದಿದ್ದರು ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT