ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ | ಅಗ್ನಿ ಅವಘಡ: ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು, 11 ಮಂದಿಗೆ ಗಾಯ

Published 14 ಮಾರ್ಚ್ 2024, 14:09 IST
Last Updated 14 ಮಾರ್ಚ್ 2024, 14:09 IST
ಅಕ್ಷರ ಗಾತ್ರ

ನವದೆಹಲಿ: ಶಾಸ್ತ್ರಿನಗರ ಸಮೀಪದ ವಸತಿ ಕಟ್ಟಡವೊಂದರಲ್ಲಿ ‌ಗುರುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ದಂಪತಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ದಂಪತಿಯನ್ನು ಮನೋಜ್ (30) ಹಾಗೂ ಪತ್ನಿ ಸುಮನಾ (25) ಎಂದು ಗುರುತಿಸಲಾಗಿದೆ.

'ಸುಟ್ಟ ಗಾಯಗಳ ಜತೆಗೆ ಉಸಿರುಗಟ್ಟಿ ಈ ನಾಲ್ವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆಯಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಉಪ ಪೊಲೀಸ್ ಆಯುಕ್ತ ಸುರೇಂದ್ರ ಚೌಧರಿ ಮಾಹಿತಿ ನೀಡಿದ್ದಾರೆ.

ಮುಂಜಾನೆ 5:20ರ ಸುಮಾರಿಗೆ ಘಟನೆ ಬಗ್ಗೆ ಮಾಹಿತಿ ಬಂದಿದೆ. ಕೂಡಲೇ ದೆಹಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ಥಳೀಯ ಪೊಲೀಸ್ ತಂಡ, 9 ಅಗ್ನಿಶಾಮಕ ವಾಹನಗಳು ಹಾಗೂ ‌ಆಂಬುಲೆನ್ಸ್‌ ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಕಟ್ಟಡ ನಾಲ್ಕು ಮಹಡಿಗಳನ್ನು ಹೊಂದಿದ್ದು, ನೆಲ ಮಹಡಿಯಲ್ಲಿ ಕಾರು ಪಾರ್ಕಿಂಗ್ ಪ್ರದೇಶವಿದೆ. ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಹೊಗೆ ಇಡೀ ಕಟ್ಟಡವನ್ನು ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT