ನವದೆಹಲಿ: ದೇಶದಾದ್ಯಂತ ಇದೇ 17ರಿಂದ ಅಕ್ಟೋಬರ್ 2ರವರೆಗೆ (15 ದಿನಗಳು) ಶುಚಿತ್ವ ಅಭಿಯಾನ ನಡೆಯಲಿದ್ದು, ಅದಕ್ಕಾಗಿ ಎರಡು ಲಕ್ಷಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
ಈ ವರ್ಷದ ‘ಸ್ವಚ್ಛತಾ ಕಿ ಸೇವಾ ಅಭಿಯಾನ’ದ ವಿಷಯವು ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಆಗಿದ್ದು, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಸಚಿವಾಲಯಗ: ಸಹಯೋಗದೊಂದಿಗೆ ನಡೆಯಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಸುದ್ದಿಗಾರರಿಗೆ ಹೇಳಿದರು.
ಅಭಿಯಾನದಲ್ಲಿ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸ್ಥಳೀಯ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಂಸದರು, ಶಾಸಕರು, ಮೇಯರ್‌ಗಳು ಕೈಜೋಡಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.