ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Last Updated 16 ಜುಲೈ 2021, 5:43 IST
ಅಕ್ಷರ ಗಾತ್ರ

ಶ್ರೀನಗರ: ನಗರದ ವಸತಿ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಶುಕ್ರವಾರ ಬೆಳಿಗ್ಗೆ ಎನ್‌ಕೌಂಟರ್‌ ನಡೆಸಿ, ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ನಗರದ ಸಫಕದಲ್‌–ಸೌದಾ ರಸ್ತೆಯಲ್ಲಿರುವ ದಾನ್ಮಾರ್ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದರು. ಘಟನೆಯಲ್ಲಿ ಇಬ್ಬರುಉಗ್ರರು ಹತರಾಗಿದ್ದಾರೆ. ಉಗ್ರರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT