ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ

Published 5 ಸೆಪ್ಟೆಂಬರ್ 2023, 6:17 IST
Last Updated 5 ಸೆಪ್ಟೆಂಬರ್ 2023, 6:17 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಚಿಂತಗುಫ ಪೊಲೀಸ್ ಠಾಣೆ ವ್ಯಾಪ್ತಿಯ ತಡ್‌ಮೆಟ್ಲಾ ಮತ್ತು ದುಲೆಡ್ ಗ್ರಾಮಗಳ ನಡುವಿನ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೇಂದ್ರ ಮೀಸಲು ಪಡೆಯ 223ನೇ ಬೆಟಾಲಿಯನ್‌ ಮತ್ತು ಜಿಲ್ಲಾ ಮೀಸಲು ಪಡೆಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಈ ಘಟನೆಯಲ್ಲಿ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮೃತ ನಕ್ಸಲರನ್ನು ಸೋಧಿ ದೇವ ಮತ್ತು ರವಾ ದೇವ ಎಂದು ಗುರುತಿಸಲಾಗಿದೆ. ಇವರು ಜಗರ್ಗುಂಡಾ ಅರಣ್ಯ ಪ್ರದೇಶದಲ್ಲಿ ಸಕ್ರಿಯರಾಗಿದ್ದರು. ಇವರ ತಲೆಗೆ ತಲಾ ₹ 1ಲಕ್ಷ ಬಹುಮಾನ ಫೋಷಣೆ ಮಾಡಲಾಗಿತ್ತು.  

ಘಟನಾ ಸ್ಥಳದಲ್ಲಿ ಡಬಲ್ ಬ್ಯಾರೆಲ್ ರೈಫಲ್ ಮತ್ತು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT