ಎರಡು ಆಸನಗಳುಳ್ಳ ಸೆಸ್ನಾ 152 ವಿಮಾನವು 40 ನಿಮಿಷ ಹಾರಾಟ ನಡೆಸಿದ ಬಳಿಕ ಮಧ್ಯಾಹ್ನ ಸುಮಾರು 1.30ಕ್ಕೆ ಪತನಗೊಂಡಿದೆ. ಎಂಜಿನ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೀಗಾಗಿರಬಹುದು ಎಂದು ಅಂದಾಜಿಸಲಾಗಿದೆ. ಪೈಲಟ್‌ಗಳಿಗೆ ಗಾಯಗಳಾಗಿವೆ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುನಾ ಕಾಂಟ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ರಾಜೋರಿಯಾ ಹೇಳಿದ್ದಾರೆ.