ಗುವಾಹಟಿ/ಗೋಲ್‌ಪಾರಾ: ನಿಷೇಧಿತ ಉಗ್ರ ಸಂಘಟನೆ ಭಾರತ ಉಪಖಂಡದ ಅಲ್–ಕೈದಾ (ಎಕ್ಯೂಐಎಸ್) ಮತ್ತು ಅನ್ಸರುಲ್ಲಾ ಬಾಂಗ್ಲಾ ಟೀಮ್ (ಎಬಿಟಿ) ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೊರ್ನೋಯಿ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಕುನಿಯಾ ಶಾಂತಿಪುರದ ನಿವಾಸಿ ಇಮಾಮ್ ಅಬ್ದುಸ್ ಸುಭಾನ್ ಮತ್ತು ಗೋಲ್‌ಪಾರಾದ ಮಟಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ತಿಲಪಾರಾ ನಾತುನ್ ನಿವಾಸಿ ಇಮಾಮ್ ಜಲಾಲುದ್ದೀನ್ ಶೇಖ್ ಎಂದು ಗುರುತಿಸಲಾಗಿದೆ.

ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೋಲ್‌ಪಾರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ರೆಡ್ಡಿ ತಿಳಿಸಿದ್ದಾರೆ.

‘ಆರೋಪಿಗಳ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಅಲ್-ಕೈದಾ ಸಂಘಟನೆಯೊಂದಿಗೆ ವ್ಯವಹರಿಸಲು ಬಳಸುತ್ತಿದ್ದ ವಸ್ತುಗಳು, ಪೋಸ್ಟರ್‌ಗಳು, ಪುಸ್ತಕಗಳು ಮತ್ತು ಇತರ ದಾಖಲೆಗಳು ಸೇರಿದಂತೆ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಐಡಿ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ರಾಕೇಶ್ ರೆಡ್ಡಿ ಹೇಳಿದ್ದಾರೆ.

ಬಂಧಿತ ಆರೋಪಿಗಳು ಬಾಂಗ್ಲಾ ಪ್ರಜೆಗಳಿಗೆ ಆಶ್ರಯ ನೀಡಿದ್ದರು. ಜತೆಗೆ ಬಾಂಗ್ಲಾದಿಂದ ಅಸ್ಸಾಂಗೆ ಬಂದ ಜಿಹಾದಿ ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಜುಲೈ 28ರಂದು ವಿವಿಧ ಜಾಗತಿಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ 11 ಮಂದಿಯನ್ನು ಬಂಧಿಸಲಾಗಿತ್ತು.

ಓದಿ...ಮುಕ್ತವಾಗಿ ಓಡಾಡುತ್ತಿದ್ದೇನೆ, ಎಲ್ಲಿಗೆ ಬರಬೇಕು ಹೇಳಿ: ಮೋದಿಗೆ ಸಿಸೋಡಿಯಾ ಸವಾಲು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.