ಜಮ್ಮು : ಕಠುವಾ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಐವರು ಭಯೋತ್ಪಾದಕರ ಗುಂಪು ಗಡಿಯಲ್ಲಿ ಒಳನುಸುಳಲು ನಡೆಸಿದ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿ, ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಾಜ್ಬಾಘ್ನ ಘಟಿ ಜುಥಾನಾ ಪ್ರದೇಶದ ಜಾಖೋಲ್ ಗ್ರಾಮದ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಅಂದಾಜು ಐವರು ಭಯೋತ್ಪಾದಕರ ಗುಂಪು ಭಾಗಿಯಾಗಿತ್ತು. ಗುಂಡಿನ ಚಕಮಕಿಯ ಆರಂಭದಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಭರತ್ ಚಲೋತ್ರಾ ಅವರಿಗೆ ಮುಖಕ್ಕೆ ಗಾಯಗಳಾಗಿವೆ. ಅವರನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವರ್ಗಾಯಿಸುವ ಮೊದಲು ಕಠುವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ಸೇರಿ ಮೂವರು ಭದ್ರತಾ ಸಿಬ್ಬಂದಿ ಗುಂಡಿನ ಚಕಮಕಿಯ ಸ್ಥಳದ ಬಳಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ನೇತೃತ್ವದಲ್ಲಿ ಸೇನೆ, ಬಿಎಸ್ಎಫ್ ಮತ್ತು ಸಿಆರ್ಪಿಎಫ್ ಸಿಬ್ಬಂದಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.