ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ

Published 7 ಮೇ 2024, 12:36 IST
Last Updated 7 ಮೇ 2024, 12:36 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.

ಭದ್ರತಾ ಪಡೆಗಳು, ಉಗ್ರರು ಅಡಗಿ ಕುಳಿತ ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ರೆಡವಾನಿ ಗ್ರಾಮವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದರು. ಮಂಗಳವಾರ ಬೆಳಿಗ್ಗೆ ಉಗ್ರರು ಮತ್ತು ಭದ್ರತಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಿದರು.

 ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಕನಿಷ್ಠ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT