ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಬುಧವಾರ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಚಿಪುರಭಟ್ಟಿ ಗ್ರಾಮದ ಬಳಿಯ ತಲಪೇರು ನದಿ ತೀರದ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ನಕ್ಸಲರು ಹತರಾಗಿದ್ದಾರೆ ಎಂದು ಐಜಿಪಿ ಸುಂದರರಾಜ್.ಪಿ ತಿಳಿಸಿದ್ದಾರೆ.

ಸ್ಥಳದಲ್ಲಿ ನಕ್ಸಲರು ಇರುವ ಕುರಿತ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಹಾಗೂ ಸಿಒಬಿಆರ್ಎ ಘಟಕದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರು ಹಾಗೂ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಆರು ಜನ ನಕ್ಸಲರು ಹತರಾಗಿದ್ದು ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೃತ ನಕ್ಸಲರ ಗುರುತು ಪತ್ತೆಯಾಗಿಲ್ಲ. ಗುಂಡಿನ ಚಕಮಕಿಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.