ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ತರಬೇತಿ ಕೇಂದ್ರದ 20 ಮಂದಿ ಯುಪಿಎಸ್‌ಸಿ ಪಾಸ್‌

Last Updated 25 ಸೆಪ್ಟೆಂಬರ್ 2021, 11:48 IST
ಅಕ್ಷರ ಗಾತ್ರ

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿಶ್ವವಿದ್ಯಾಲಯದ ‘ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿ’ಯಲ್ಲಿ (ಆರ್‌ಸಿಎ) ತರಬೇತಿ ಪಡೆದ 20 ವಿದ್ಯಾರ್ಥಿಗಳು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ವಿಶ್ವವಿದ್ಯಾನಿಲಯವು ಶುಕ್ರವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಆಯ್ಕೆಯಾದ ವಿದ್ಯಾರ್ಥಿಗಳು ಜನವರಿಯಲ್ಲಿ ಯುಪಿಎಸ್‌ಸಿ ನಡೆಸಿದ ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. ನಂತರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ನಡೆದಿದ್ದ ವ್ಯಕ್ತಿತ್ವ ಪರೀಕ್ಷೆಗಳನ್ನು ಎದುರಿಸಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.‌

ಅರ್ಹತೆ ಪಡೆದ ವಿದ್ಯಾರ್ಥಿಗಳನ್ನು ಜಾಮಿಯ ಮಿಲಿಯಾ ವಿವಿಯ ಉಪ ಕುಲಪತಿ ನಜ್ಮಾ ಅಖ್ತರ್ ಅಭಿನಂದಿಸಿದ್ದಾರೆ. ಅಲ್ಲದೆ, ಅಭ್ಯರ್ಥಿಗಳ ಈ ಸಾಧನೆಗೆ ಕಾರಣರಾದ ಜೆಎಂಐನ ಬೋಧಕವರ್ಗವನ್ನು ಶ್ಲಾಘಿಸಿದ್ದಾರೆ.

ಜೆಎಂಐನಲ್ಲಿ ಕೋಚಿಂಗ್ ಮತ್ತು ವೃತ್ತಿ ಯೋಜನಾ ಕೇಂದ್ರವು ನಡೆಸುತ್ತಿರುವ ಜಾಮಿಯಾ ಮಿಲಿಯಾ ವಿವಿಗೆ ಯುಜಿಸಿ ಧನಸಹಾಯ ನೀಡುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಮತ್ತು ವಸತಿ ಸೌಲಭ್ಯಗಳನ್ನು ಈ ತರಬೇತಿ ಕೇಂದ್ರ ಒದಗಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT