ಪ್ರತಾಪಗಢ (ಉತ್ತರ ಪ್ರದೇಶ): ಜಿಲ್ಲೆಯ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ಸರಳಿನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವಿಶಾಲ್ ಪಾಂಡೆ ಮೃತ ಯುವಕ. ಬಘರೈ ಪೊಲೀಸ್ ಠಾಣಾ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿಯಾಗಿರುವ ಈತನಿಗೆ ಕಾರನ್ನು ಡಿಕ್ಕಿ ಹೊಡೆಸಿ, ಕಬ್ಬಿಣದ ರಾಡ್‌ನಿಂದ ಹೊಡೆದು ಬುಧವಾರ ರಾತ್ರಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್ ನಾಥ್ ಗುಪ್ತಾ ಹೇಳಿದ್ದಾರೆ.

ಮೃತ ಯುವಕನ ಕುಟುಂಬದ ದೂರಿನ ಮೇರೆಗೆ ರಂಗ್ ಬಹದ್ದೂರ್ ಗ್ರಾಮದ ಮುಖ್ಯಸ್ಥ ಸೇರಿ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕುಟುಂಬದ ಮೇಲಿನ ಹಳೆಯ ದ್ವೇಷವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.