ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ಮಹಿಳಾ ವಿ.ವಿಗೆ ಪ್ರಸ್ತಾವ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ವದೆಹಲಿ (ಪಿಟಿಐ):  ಮಹಿಳೆಯರ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶದಾದ್ಯಂತ 20 ಹೊಸ ಮಹಿಳಾ ವಿಶ್ವವಿದ್ಯಾಲಯಗಳನ್ನು ತೆರೆಯುವ ಪ್ರಸ್ತಾವ ಮುಂದಿಟ್ಟಿದೆ.

ಈ ಹೊಸ ವಿಶ್ವವಿದ್ಯಾಲಯಗಳ ಜೊತೆಗೆ ದೇಶದ 40 ಕೇಂದ್ರೀಯ ವಿಶ್ವವಿದ್ಯಾಲಯಗಳ ಅಡಿ 800 ಹೊಸ ಕಾಲೇಜುಗಳನ್ನು ತೆರೆಯುವ ವಿಷಯವನ್ನು ಯುಜಿಸಿಯ 12ನೇ ಯೋಜನಾ ಪತ್ರದಲ್ಲಿ ಪ್ರಸ್ತಾಪ ಮಾಡಲಾಗಿದೆ. ಈ ಯೋಜನೆಯ ಅಡಿ, ಪ್ರತಿ ರಾಜ್ಯದಲ್ಲೂ 20 ಹೊಸ ಕಾಲೇಜುಗಳನ್ನು ತೆರೆಯಲಾಗುತ್ತದೆ.

ಯೋಜನೆಗಳ ಅನುಷ್ಠಾನಕ್ಕಾಗಿ ಐದು ವರ್ಷಗಳ ಆಯವ್ಯಯ ಅನುದಾನವನ್ನು 46,632 ಕೋಟಿ ರೂಪಾಯಿಗಳಿಂದ 1,84,740 ಕೋಟಿ ರೂಪಾಯಿಗೆ ಹೆಚ್ಚಿಸುವಂತೆ ಕೋರಲಾಗಿದೆ. ಇದಕ್ಕೆ ಅಗತ್ಯವಾದ ಧನಸಹಾಯವನ್ನು ಕೇಂದ್ರ ಸರ್ಕಾರ ಮತ್ತು ಭೂಮಿಯನ್ನು ಆಯಾ ರಾಜ್ಯ ಸರ್ಕಾರಗಳು ನೀಡುತ್ತವೆ ಎಂಬ ಆಶಾಭಾವನೆಯನ್ನು  ವ್ಯಕ್ತಪಡಿಸಿದೆ. 

ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಕೆಲವರು, ಹೆಣ್ಣು ಮಕ್ಕಳನ್ನು ಶಿಕ್ಷಣ ಸಂಸ್ಥೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಸಾಂಪ್ರದಾಯಿಕ ಮತ್ತು ಗ್ರಾಮೀಣ ಪ್ರದೇಶಗಳ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣದ ಉದ್ದೇಶದಿಂದ ಈ ವಿಶ್ವವಿದ್ಯಾಲಯಗಳನ್ನು ತೆರೆಯಲಾಗುತ್ತಿದೆ. ಅಂತರ ರಾಷ್ಟ್ರೀಯ ಗುಣಮಟ್ಟದ ವಿಶ್ವವಿದ್ಯಾಲಯಗಳಲ್ಲಿ ಅಗತ್ಯ ಮೂಲಸೌಲಭ್ಯ, ಹಾಸ್ಟೆಲ್, ಮೈದಾನ, ಗ್ರಂಥಾಲಯ, ಅತ್ಯಾಧುನಿಕ ತಂತ್ರಜ್ಞಾನದ ತರಗತಿಗಳಿರುತ್ತವೆ ಎಂದು ಯುಜಿಸಿ ಹೇಳಿದೆ. 

ಕಾಲೇಜುಗಳ ಸಂಖ್ಯೆ, ಪ್ರವೇಶಾವಕಾಶ ಹೆಚ್ಚಳ, ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆಯ ಉದ್ದೇಶದಿಂದ ಸ್ವಾಯತ್ತ ಕಾಲೇಜುಗಳನ್ನು ಮೇಲ್ದರ್ಜೆಗೆ ಏರಿಸುವ ಗುರಿಯನ್ನು ಯುಜಿಸಿ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT