ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾ ದಾಳಿ| CRPF ಯೋಧರಿಗೆ ಅಂದು ಕಾಪ್ಟರ್‌ ಕೊಡಲಿಲ್ಲ ಯಾಕೆ? ಕಾಂಗ್ರೆಸ್‌

Last Updated 15 ಏಪ್ರಿಲ್ 2023, 15:41 IST
ಅಕ್ಷರ ಗಾತ್ರ

ನವದೆಹಲಿ: ‘ಸಿಆರ್‌ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್‌ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ‘2019ರ ಪುಲ್ವಾಮಾ ದಾಳಿಯು ಲೋಕಸಭಾ ಚುನಾವಣೆಯ ಲಾಭ ಪಡೆಯಲು ರೂಪಿಸಲಾಗಿದ್ದ ಯೋಜನೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಿದೆ.

‘ಸಿಆರ್‌ಪಿಎಫ್‌ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ಬರಲು ಐದು ಕಾಪ್ಟರ್‌ಗಳಿಗೆ ಮನವಿ ಮಾಡಿದ್ದರು. ಆದರೆ ರಕ್ಷಣಾ ಸಚಿವಾಲಯ ಅದನ್ನು ತಿರಸ್ಕರಿಸಿದೆ. ಅವರಿಗೆ ಅಂದು ಕಾಪ್ಟರ್‌ ಯಾಕೆ ಕೊಡಲಿಲ್ಲ? ಅವರನ್ನು ಯಾಕೆ ಏರ್‌ಲಿಫ್ಟ್ ಮಾಡಲಿಲ್ಲ? ಕಾಪ್ಟರ್‌ ವ್ಯವಸ್ಥೆ ಮಾಡಿದಿದ್ದರೆ ಭಯೋತ್ಪಾದನೆಯ ಸಂಚು ವಿಫಲವಾಗುತ್ತಿತ್ತು’ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

‘ಜೈಶ್ ಸಂಘಟನೆಯ ಬೆದರಿಕೆಗಳನ್ನು ಏಕೆ ನಿರ್ಲಕ್ಷಿಸಯಿತು. 2019ರ ಜನವರಿ 2 ಮತ್ತು ಫೆಬ್ರುವರಿ13 ನಡುವೆ ಭಯೋತ್ಪಾದಕ ದಾಳಿ ನಡೆಯಬಹುದಾದ ಸಾಧ್ಯತೆಗಳ ಬಗ್ಗೆ ಬಂದಿದ್ದ 11 ಗುಪ್ತಚರ ಮಾಹಿತಿಗಳನ್ನು ಏಕೆ ನಿರ್ಲಕ್ಷಿಸಲಾಯಿತು. 300 ಕೆಜಿ ಆರ್‌ಡಿಎಕ್ಸ್ ಅನ್ನು ಉಗ್ರರು ಹೇಗೆ ಸಂಗ್ರಹಿಸಿದರು’ ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.

ಪ್ರಕರಣದ ತನಿಖೆ ಏನಾಯಿತು ಎಂಬುದರ ಬಗ್ಗೆಯೂ ಉತ್ತರಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

‘ಕೇಂದ್ರ ಸರ್ಕಾರವು ‘ಕನಿಷ್ಟ ಆಡಳಿತ, ಗರಿಷ್ಠ ಮೌನ’ ಎಂಬ ತತ್ವ ಪಾಲಿಸುತ್ತಿದೆ. ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಜವಾಬ್ದಾರಿ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಕೇಳುತ್ತಲೇ ಇರುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

2019ರ ಫೆಬ್ರುವರಿ 14ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಸಿಆರ್‌ಪಿಎಪ್‌ನ 40 ಯೋಧರು ಹುತಾತ್ಮರಾಗಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT