ನವದೆಹಲಿ: 2020ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರದ ಸಹ ಪಿತೂರಿಕೋರರ ಜೊತೆ ತಮಗೆ ಯಾವ ನಂಟೂ ಇರಲಿಲ್ಲ ಎಂದು ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್ಗೆ ಗುರುವಾರ ತಿಳಿಸಿದ್ದಾರೆ. ತಾವು ಮಾಡಿದ ಸಾರ್ವಜನಿಕ ಭಾಷಣಗಳು ಅಹಿಂಸೆಗೆ ಕರೆ ನೀಡಿದ್ದವು ಎಂದು ಅವರು ಹೇಳಿದ್ದಾರೆ.

ತಾವು ನಾಲ್ಕು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಪೊಲೀಸ್ ವಶದಲ್ಲಿ ಇರುವುದಾಗಿ, ತಮಗೆ ಜಾಮೀನು ಮಂಜೂರು ಮಾಡಬೇಕು ಎಂಬುದಾಗಿ ಅವರು ನ್ಯಾಯಮೂರ್ತಿ ನವೀನ್ ಚಾವ್ಲಾ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು.

ಉಮರ್ ಖಾಲಿದ್, ಇಮಾಮ್ ಮತ್ತು ಇತರ ಕೆಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 2020ರಲ್ಲಿ ನಡೆದ ಹಿಂಸಾಚಾರದ ಪ್ರಮುಖ ಸೂತ್ರಧಾರರು ಇವರು ಎಂಬ ಆರೋಪ ಹೊರಿಸಲಾಗಿದೆ. ಈ ಗಲಭೆಯಲ್ಲಿ 53 ಮಂದಿ ಮೃತಪಟ್ಟಿದ್ದರು. ‘ನನ್ನ ಹಾಗೂ ಸಹ ಪಿತೂರಿಕೋರರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ’ ಎಂದು ಇಮಾಮ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.