ಚೆನ್ನೈ: ತಮಿಳುನಾಡಿನಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ವಿಫಲವಾಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವನ್ನು 2026ರ ಚುನಾವಣೆಯಲ್ಲಿ ಅಧಿಕಾರದಿಂದ ಕಿತ್ತೊಗೆಯಲು ವನಿತೆಯರು ಪ್ರತಿಜ್ಞೆ ಮಾಡಬೇಕು ಎಂದು ಟಿವಿಎಕೆ ಮುಖ್ಯಸ್ಥ ಮತ್ತು ನಟ ವಿಜಯ್ ಶನಿವಾರ ಕರೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚುತ್ತಿವೆ ಎಂಬ ವಿರೋಧ ಪಕ್ಷಗಳ ಆರೋಪಗಳ ಬೆನ್ನಲ್ಲೇ ವಿಜಯ್ ಅವರು, ಅಂತರರಾಷ್ಟ್ರೀಯ ಮಹಿಳಾ ದಿನ ವಿಡಿಯೊ ಸಂದೇಶ ಹಂಚಿಕೊಂಡಿದ್ದಾರೆ.

ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲ ಆರ್. ಎನ್. ರವಿ ಅವರನ್ನು ಭೇಟಿ ಮಾಡಿದ್ದ ವಿಜಯ್, ಡಿಎಂಕೆ ಸರ್ಕಾರ ಮಹಿಳೆಯರ ಸುರಕ್ಷತೆ ಖಾತ್ರಿಪಡಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.