ಕೋಲ್ಕತ್ತ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ 21 ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕ, ನಟ ಮಿಥುನ್ ಚಕ್ರವರ್ತಿ ಶನಿವಾರ ಪುನರುಚ್ಚರಿಸಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಲಿವುಡ್ ತಾರೆ, ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಯ 38 ಶಾಸಕರು ವಿರೋಧ ಪಕ್ಷದ ಸಂಪರ್ಕದಲ್ಲಿದ್ದಾರೆ. ಈ ಪೈಕಿ 21 ಶಾಸಕರು ನೇರವಾಗಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಜುಲೈನಲ್ಲಿ ನಾನು ಹೇಳಿದ ಮಾತಿಗೆ ಬದ್ಧವಾಗಿದ್ದೇನೆ. ಸ್ವಲ್ಪ ಕಾಯಿರಿ, ನಿಮಗೆ ಎಲ್ಲವೂ ತಿಳಿಯುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಬಿಜೆಪಿ ಅಣತಿ ಪಾಲಿಸುತ್ತಿರುವ ಪಂಜಾಬ್ ರಾಜ್ಯಪಾಲ: ಎಎಪಿ ಆರೋಪ

ಟಿಎಂಸಿ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸುವುದಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ವಿರೋಧದ ಬಗ್ಗೆ ಅರಿವಿದೆ. ನಾನು ಮೂರ್ಖನಲ್ಲ. ಮತ್ತದೇ ತಪ್ಪು ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.