ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

2,100 ಬುಡಕಟ್ಟು ವಿದ್ಯಾರ್ಥಿಗಳಿಗೆ ತರಬೇತಿ: ಕೇಂದ್ರ

Published 8 ಆಗಸ್ಟ್ 2024, 14:29 IST
Last Updated 8 ಆಗಸ್ಟ್ 2024, 14:29 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ಮೂರು ವರ್ಷದಲ್ಲಿ ಸುಮಾರು 2100 ಬುಡಕಟ್ಟು ವಿದ್ಯಾರ್ಥಿಗಳಿಗೆ ಸೆಮಿಕಂಡಕ್ಟರ್ ತಂತ್ರಜ್ಞಾನದ ಕುರಿತು ತರಬೇತಿ ನೀಡಲಾಗುವುದು ಎಂದು ಸರ್ಕಾರವು  ಗುರುವಾರ ಸಂಸತ್ತಿನಲ್ಲಿ ತಿಳಿಸಿದೆ. 

ಬುಡಕಟ್ಟು ವ್ಯವಹಾರ ಸಚಿವಾಲಯವು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದೊಂದಿಗೆ ಸುಮಾರು 1500 ಬುಡಕಟ್ಟು ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಮತ್ತು 600 ವಿದ್ಯಾರ್ಥಿಗಳಿಗೆ ಮೂಲಭೂತ ಸೆಮಿಕಂಡಕ್ಟರ್ ತಂತ್ರಜ್ಞಾನದ ಕುರಿತು ತರಬೇತಿ ನೀಡಲು ಮುಂದಾಗಿದೆ.

ಬಿಜೆಪಿ ಸಂಸದ ಸಿ. ಎಂ. ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವ ದುರ್ಗಾದಾಸ್ ಉಯಿಕೆ ಅವರು, ‘ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಸೆಮಿಕಂಡಕ್ಟರ್ ತಯಾರಿಕೆ ಮತ್ತು ಗುಣಲಕ್ಷಣದ ತರಬೇತಿಯನ್ನು ಸಚಿವಾಲಯವು ಭಾರತೀಯ ವಿಜ್ಞಾನ ಸಂಸ್ಥೆಯ ನ್ಯಾನೊ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕೇಂದ್ರಕ್ಕೆ ನೀಡಿದೆ’ ಎಂದು ಹೇಳಿದರು.

ಎಂಜಿನಿಯರಿಂಗ್‌ ಪದವಿ ಪಡೆದ ಬುಡಕಟ್ಟು ವಿದ್ಯಾರ್ಥಿಗಳು ಈ ತರಬೇತಿಗಾಗಿ ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT