ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀಲಂಕಾದಿಂದ ತಮಿಳುನಾಡಿನ 22 ಮೀನುಗಾರರ ಬಂಧನ: ಕೇಂದ್ರಕ್ಕೆ ಸ್ಟಾಲಿನ್ ಮಾಹಿತಿ

ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್
Published 24 ಜೂನ್ 2024, 13:36 IST
Last Updated 24 ಜೂನ್ 2024, 13:36 IST
ಅಕ್ಷರ ಗಾತ್ರ

ನವದೆಹಲಿ: ‘ತಮಿಳುನಾಡಿನ 22 ಮೀನುಗಾರರನ್ನು ಬಂಧಿಸಿರುವ ಶ್ರೀಲಂಕಾ, ಆ ಮೀನುಗಾರರ ಮೂರು ಹಡಗುಗಳನ್ನು ಸಹ ಜಪ್ತಿ ಮಾಡಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. 

ಮೀನುಗಾರರ ರಕ್ಷಣೆ ಮತ್ತು ಅವರ ಹಡಗುಗಳ ಬಿಡುಗಡೆಗೆ ಕೇಂದ್ರ ಸರ್ಕಾರವು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ‘ಜೂನ್ 22ರಂದು ರಾಮೇಶ್ವರಂ ಬಂದರು ಪ್ರದೇಶದಲ್ಲಿ 22 ಮೀನುಗಾರರ ಬಂಧನವಾಗಿದೆ. ಇದರಿಂದ ಆ ಕುಟುಂಬಗಳ ಜೀವನೋಪಾಯಕ್ಕೆ ತೊಡಕಾಗಿದೆ. ಅವರ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜೊತೆಗೆ ಶ್ರೀಲಂಕಾದ ಜೈಲಿನಲ್ಲಿರುವ ಮೀನುಗಾರರ ಭೇಟಿಗೆ ವಿವಿಧ ಮೀನುಗಾರರ ಸಂಘಟನೆಗಳು ತೆರಳಲು ಮುಂದಾಗಿದ್ದು, ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಮನವಿ ಮಾಡಿದ್ದಾರೆ. 

ಇಂಥ ಸಮಸ್ಯೆಗಳ ಪರಿಹಾರಕ್ಕೆ ಸ್ಥಾಪಿಸಲಾಗಿರುವ ಜಂಟಿ ಕಾರ್ಯಶೀಲ ಗ್ರೂಪ್ ಅನ್ನು ಪುನಶ್ಚೇತನಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT