ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ವಿಧಾನಸಭೆ ಚುನಾವಣೆ: 2,290 ಅಭ್ಯರ್ಥಿಗಳು ಕಣದಲ್ಲಿ

Published 16 ನವೆಂಬರ್ 2023, 12:34 IST
Last Updated 16 ನವೆಂಬರ್ 2023, 12:34 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 2,290 ಸ್ಪರ್ಧಿಗಳು ಕಣದಲ್ಲಿದ್ದಾರೆ. 608 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

ಬಿಆರ್‌ಎಸ್‌ ನಾಯಕ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಸ್ಪರ್ಧಿಸುತ್ತಿರುವ ಗಜ್ವೆಲ್‌ನಿಂದ 44 ಮತ್ತು ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಿಂದ 39 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳಿಂದ ಟಿಕೆಟ್‌ ಸಿಗದೆ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದ ಹಲವು ಮಂದಿ ಅಭ್ಯರ್ಥಿಗಳು ಬುಧವಾರ ನಾಮಪತ್ರ ಹಿಂಪಡೆದಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಒಟ್ಟು 2,898 ಅಭ್ಯರ್ಥಿಗಳ ನಾಮಪತ್ರಗಳು ಅರ್ಹವಾಗಿದ್ದು, 606 ಅಭ್ಯರ್ಥಿಗಳ ನಾಮಪತ್ರಗಳನ್ನು ಪರಿಶೀಲನೆ ವೇಳೆ ತಿರಸ್ಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣವು ಸುಮಾರು 3.26 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿದ್ದು, ಬಹುತೇಕ ಸಮಾನ ಸಂಖ್ಯೆಯ ಪುರುಷ ಮತ್ತು ಮಹಿಳೆಯರನ್ನು ಹೊಂದಿದೆ ಎಂದು ಇತ್ತೀಚಿನ ವರದಿಯು ತಿಳಿಸಿದೆ.

119 ಸದಸ್ಯ ಬಲ ಹೊಂದಿರುವ ತೆಲಂಗಾಣ ವಿಧಾನಸಭೆ ಚುನಾವಣೆಯು ನವೆಂಬರ್‌ 30 ರಂದು ನಡೆಯಲಿದ್ದು, ಡಿಸೆಂಬರ್‌ 3 ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT