ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿಲ ಸೋರಿಕೆ: 24 ವಿದ್ಯಾರ್ಥಿಗಳು ಅಸ್ವಸ್ಥ

Published 11 ಆಗಸ್ಟ್ 2023, 14:27 IST
Last Updated 11 ಆಗಸ್ಟ್ 2023, 14:27 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ನರೈನಾ ಪ್ರದೇಶದಲ್ಲಿರುವ ಮಹಾನಗರ ಪಾಲಿಕೆ ಅಧೀನದ ಶಾಲೆಯೊಂದರ ಬಳಿ ಶುಕ್ರವಾರ ಅನಿಲ ಸೋರಿಕೆ ಉಂಟಾಗಿ 24 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

‘15 ಮಂದಿ ವಿದ್ಯಾರ್ಥಿಗಳನ್ನು ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಆಚಾರ್ಯ ಶ್ರೀ ಭಿಕ್ಷು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಆರೋಗ್ಯದಿಂದಿದ್ದಾರೆ’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕ ದುರ್ಗೇಶ್‌ ಪಾಠಕ್‌ ಹೇಳಿದ್ದಾರೆ.

‘ಶಾಲೆ ಬಳಿಯ ರೈಲು ಹಳಿಯ ಸಮೀಪ ಅನಿಲ ಸೋರಿಕೆಯಾಗಿದ್ದು, ಈ ಕುರಿತು ತನಿಖೆ ನಡೆಸಲಾಗುವುದು’ ಎಂದು ಮಹಾನಗರ ಪಾಲಿಕೆ ಹೇಳಿಕೆಯಲ್ಲಿ ತಿಳಿಸಿದೆ.

ನಿಗಮ್‌ ಪ್ರತಿಭಾ ವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ವಾಂತಿ ಮಾಡುತ್ತಿದ್ದು, ಅಸ್ವಸ್ಥರಾಗಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಕೂಡಲೇ ಸ್ಥಳಕ್ಕೆ ತೆರಳಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಶಾಲೆಯ ಪರಿಸರದಲ್ಲಿ ಕೆಟ್ಟ ವಾಸನೆ ಹಬ್ಬಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದೂ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT