ಧನಬಾದ್/ರಾಂಚಿ: ‘ಜಾರ್ಖಂಡ್ನ ಧನಬಾದ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿಗೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಲಾಗಿದ್ದು, 243 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬಯಲುಮಾಡಿದ ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಭಾನುವಾರ ಸಂಜೆ, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರುವ ಕೆಲವು ಪ್ರದೇಶಗಳ ಮೇಲೆ ದಾಳಿ ನಡೆಸಿ, 243 ವ್ಯಕ್ತಿಗಳನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಲಾಗಿದೆ‘ ಎಂದುಹಿರಿಯ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಸಂಜೀವ್ ಕುಮಾರ್ ತಿಳಿಸಿದ್ದಾರೆ.

‘ಪೊಲೀಸರು ಜಿಲ್ಲೆಯಲ್ಲಿರುವ 53 ಹೋಟೆಲ್ಗಳಲ್ಲಿ ಶೋಧ ಕಾರ್ಯ ನಡೆಸಿ ಈ ಘಟನೆಗೆ ಸಂಪರ್ಕವಿರುವ 17 ಮಂದಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ‘ ಎಂದು ಅವರು ತಿಳಿಸಿದರು.

‘ನ್ಯಾಯಾಧೀಶರಿಗೆ ಗುದ್ದಿದ ಆಟೊರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸೂಕ್ತ ದಾಖಲೆಗಳಿಲ್ಲದ 250 ಆಟೊರಿಕ್ಷಾಗಳನ್ನು ವಶಪಡಿಸಿಕೊಂಡಿದ್ದಾರೆ‘ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಕಳೆದ ಬುಧವಾರ ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದರು. ಆಗ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದು, ಪರಾರಿಯಾಗಿತ್ತು.ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.