ಇಂದೋರ್: ಇಂದೋರ್ನಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 25 ಜನರು ಫಿನಾಯಿಲ್ ಸೇವಿಸಿದ್ದಾಗಿ ಹೇಳಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತ್ ರಾವ್ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಬಸಂತ್ ಕುಮಾರ್ ನಿಂಗ್ವಾಲ್ ಹೇಳಿದ್ದಾರೆ.

‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 25 ಜನರು ನಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ರಾತ್ರಿ ತಾವು ಒಟ್ಟಾಗಿ ಫಿನಾಯಿಲ್ ಕುಡಿದಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಅದು ಇನ್ನೂ ಖಚಿತವಾಗಿಲ್ಲ’ ಎಂದು ಅವರು ಹೇಳಿದ್ದಾರೆ.

ಅವರ ಈ ಕೃತ್ಯಕ್ಕೆ ಕಾರಣವೇನು ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆಯ ನಂತರವೇ ಅವರು ಯಾಕಾಗಿ ಮತ್ತು ಏನನ್ನು ಸೇವಿಸಿದ್ದಾರೆ ಎಂದು ತಿಳಿದು ಬರುತ್ತದೆ ಎಂದು ಹೆಚ್ಚುವರಿ ಉಪ ಆಯುಕ್ತ ರಾಜೇಶ್ ದಂಡೋಟಿಯಾ ಹೇಳಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಎರಡು ಸ್ಥಳೀಯ ಗುಂಪುಗಳ ನಡುವಿನ ವಿವಾದದಿಂದ ಇದು ನಡೆದಿರಬಹುದು ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.