ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದ ಅವಧಿಯಲ್ಲಿ 262 ಹೊಸ ವೈದ್ಯಕೀಯ ಕಾಲೇಜುಗಳ ನಿರ್ಮಾಣ: ಧರ್ಮೇಂದ್ರ ಪ್ರಧಾನ್

Published 3 ಜುಲೈ 2023, 6:10 IST
Last Updated 3 ಜುಲೈ 2023, 6:10 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದ ನಂತರ 262 ಹೊಸ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಭಾನುವಾರ ಹೇಳಿದ್ದಾರೆ.

ದೆಹಲಿ ಬಿಜೆಪಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಧರ್ಮೇಂದ್ರ, ದೇಶದಲ್ಲಿ 700 ನವೋದಯ ವಿದ್ಯಾಲಯಗಳನ್ನು ನಿರ್ಮಿಸಿದ್ದೇವೆ ಎಂದು ಕಾಂಗ್ರೆಸ್‌ ಹೇಳುತ್ತಿದೆ, ಮೋದಿ ಸರ್ಕಾರ ಕೇವಲ ಒಂಬತ್ತು ವರ್ಷಗಳಲ್ಲಿ ದೇಶದ ಎಲ್ಲಾ ಬುಡಕಟ್ಟು ಮತ್ತು ಹಿಂದುಳಿದ ಜಿಲ್ಲೆಗಳಲ್ಲಿ ‘692 ಏಕಲವ್ಯ ಶಾಲೆಗಳನ್ನು’ ಮಂಜೂರು ಮಾಡಿದೆ ಎಂದರು. ಇದೇ ವೇಳೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮೋದಿ ಸರ್ಕಾರದ ಒಂಬತ್ತು ವರ್ಷಗಳ ಕೆಲಸದ ಕುರಿತ ಸಂಶೋಧನಾ ಪ್ರಬಂಧವನ್ನು ಬಿಡುಗಡೆ ಮಾಡಿದರು.

‘ಸ್ವಾತಂತ್ರ್ಯದ ನಂತರ 2014ರವರೆಗೆ ದೇಶದಾದ್ಯಂತ ಒಟ್ಟು 380 ವೈದ್ಯಕೀಯ ಕಾಲೇಜುಗಳಿದ್ದವು, ಆದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 262 ಹೊಸ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಯಿತು’ ಎಂದು ಪ್ರಧಾನ್‌ ಅವರು ದೆಹಲಿ ಬಿಜೆಪಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಹೆಚ್ಚಿಸುವ ಕೆಲಸವನ್ನೂ ಮೋದಿ ಸರ್ಕಾರ ಮಾಡಿದೆ ಎಂದು ಅವರು ಹೇಳಿದರು.

ಗಾಂಧಿ ಕುಟುಂಬದ ಆಡಳಿತದ ಸಂದರ್ಭದಲ್ಲಿ ‘ಕೇವಲ ಒಂದು ಏಮ್ಸ್‌ ನಿರ್ಮಿಸಲಾಗಿದೆ’, ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ (ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ) ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ಆರು ಏಮ್ಸ್‌ಗಳನ್ನು ನಿರ್ಮಿಸಿದರು. ಆದರೆ, 10 ವರ್ಷಗಳ ಕಾಲ ಆಡಳಿತ ನಡೆಸಿದ ಮನಮೋಹನ್‌ ಸಿಂಗ್‌ ಸರ್ಕಾರವು ಯಾವುದೇ ಹೊಸ ಏಮ್ಸ್‌ ಅನ್ನು ನಿರ್ಮಿಸಲಿಲ್ಲ ಎಂದು ಧರ್ಮೇಂದ್ರ ಪ್ರಧಾನ್‌ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದರು.

2014ರಲ್ಲಿ ಮೋದಿಯವರು ಪ್ರಧಾನಿಯಾದಾಗ, ‘ದೇಶದ ಕಟ್ಟಕಡೆಯ ಪ್ರಜೆಗೂ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದರು, ಇಂದು ಅದರ ಪರಿಣಾಮವಾಗಿ ಕಳೆದ ಒಂಬತ್ತು ವರ್ಷಗಳಲ್ಲಿ 15 ಹೊಸ ಏಮ್ಸ್‌ಗಳನ್ನು ಸಾರ್ವಜನಿಕರಿಗೆ ಅರ್ಪಿಸಲಾಗಿದೆ’ ಎಂದು ಪ್ರಧಾನ್‌ ತಿಳಿಸಿದರು.

ಭಾರತವು ಉದಯೋನ್ಮುಖ ಶಕ್ತಿಯಾಗಿ ಹೊರಹೊಮ್ಮುತ್ತಿದೆ, ಇದು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಮಾತ್ರ ಸಾಧ್ಯವಾಗಿದೆ ಎಂಬ ಸಂದೇಶ ಇಂದು ಪ್ರಪಂಚದಾದ್ಯಂತ ಹರಡುತ್ತಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT