ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

272 ಮಂದಿಗೆ ವಿದೇಶಿಯರಿಗೆ ಪದ್ಮ ಪುರಸ್ಕಾರ’

Last Updated 23 ಜುಲೈ 2019, 19:30 IST
ಅಕ್ಷರ ಗಾತ್ರ

ನವದೆಹಲಿ:1954ರಿಂದ ಈಚೆಗೆ ವಿದೇಶಿಯರು, ಅನಿವಾಸಿ ಭಾರತೀಯರು, ಸಾಗರೋತ್ತರ ಭಾರತೀಯರು ಮತ್ತು ಭಾರತ ಮೂಲದ 272 ಮಂದಿಗೆಪದ್ಮ ಪುರಸ್ಕಾರ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಜನಾಂಗ, ಉದ್ಯೋಗ, ಸ್ಥಾನಮಾನ ಮತ್ತು ಲಿಂಗ ಭೇದವಿಲ್ಲದೇ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದುಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ್ ರೈ ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸರ್ಕಾರಿ ಉದ್ಯೋಗಿಗಳು ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವವರನ್ನು ಈ ಪುರಸ್ಕಾರಕ್ಕೆ ಪರಿಗಣಿಸುವುದಿಲ್ಲ ಎಂದು ಅವರು ಹೇಳಿದರು.

ಪದ್ಮ ಪ್ರಶಸ್ತಿ ಆಯ್ಕೆಗೆ ಯಾವುದೇ ಕಠಿಣ ಮಾನದಂಡಗಳು ಅನ್ವಯಿಸುವುದಿಲ್ಲ. ವ್ಯಕ್ತಿಯ ಜೀವಮಾನದ ಸಾಧನೆ ಮತ್ತು ಸಾರ್ವಜನಿಕ ಸೇವೆ ಮುಖ್ಯವಾಗುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT