ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್‌ ಸ್ಫೋಟ: ಮೂವರು ಸೇನಾ ಸಿಬ್ಬಂದಿಗೆ ಗಾಯ

Published 1 ನವೆಂಬರ್ 2023, 10:41 IST
Last Updated 1 ನವೆಂಬರ್ 2023, 10:41 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್‌ ಸ್ಫೋಟಗೊಂಡ ಪರಿಣಾಮ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.

ಮೆಂಧರ್ ಸೆಕ್ಟರ್‌ನ ಪ್ರದೇಶದಲ್ಲಿ ಸೈನಿಕರು ಗಸ್ತು ತಿರುಗುತ್ತಿದ್ದ ವೇಳೆ ನೆಲಬಾಂಬ್ ಸ್ಫೋಟಗೊಂಡಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವ ಸಿಬ್ಬಂದಿಯನ್ನು ರಜೌರಿಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT