ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಚ್‌ಯು ಕ್ಯಾಂಪಸ್‌ ಐಐಟಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಮೂವರ ಬಂಧನ

Published 31 ಡಿಸೆಂಬರ್ 2023, 9:31 IST
Last Updated 31 ಡಿಸೆಂಬರ್ 2023, 9:31 IST
ಅಕ್ಷರ ಗಾತ್ರ

ವಾರಣಾಸಿ: ಬಿಎಚ್‌ಯು ಕ್ಯಾಂಪಸ್‌ನಲ್ಲಿ ಐಐಟಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರೋಪಿಗಳನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಹಾಗೂ ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ ಎಂದು ಲಂಕಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶಿವಕಾಂತ್ ಮಿಶ್ರಾ ತಿಳಿಸಿದ್ದಾರೆ.

ನ.1 ರ ರಾತ್ರಿ ಅತ್ಯಾಚಾರ ಘಟನೆ ನಡೆದಿತ್ತು. ದೂರುದಾರರ ಪ್ರಕಾರ, ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಳು. ಆಗ ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು, ಸ್ನೇಹಿತನಿಂದ ಬೇರ್ಪಡಿಸಿ ಅವಳನ್ನು ಬಲವಂತವಾಗಿ ಕರೆದೊಯ್ದು ಅತ್ಯಾಚಾರವೆಸಗಿದ್ದರು.

ಬಳಿಕ ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ, ವಿಡಿಯೊ ಮಾಡಿ ಫೋಟೋ ತೆಗೆದಿದ್ದಾರೆ ಎನ್ನಲಾಗಿದೆ. ಸುಮಾರು 15 ನಿಮಿಷಗಳ ನಂತರ ಆಕೆಯ ಫೋನ್ ನಂಬರ್‌ ತೆಗೆದುಕೊಂಡು ಹೋಗಲು ಬಿಟ್ಟು ಎಂದು ದೂರುದಾರರು ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ 354 (ಮಹಿಳೆ ಮೇಲೆ ದೌರ್ಜನ್ಯ), ಸಾಮೂಹಿಕ ಅತ್ಯಾಚಾರ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT