ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಸ್ಫೋಟಕ ಸಾಗಿಸುತ್ತಿದ್ದ ಮೂವರ ಬಂಧನ

Last Updated 15 ಜುಲೈ 2021, 6:10 IST
ಅಕ್ಷರ ಗಾತ್ರ

ಕೋಲ್ಕತ್ತ: ಅಪಾರ ಪ್ರಮಾಣದ ಸ್ಫೋಟಕ ಮತ್ತು ಮದ್ದುಗುಂಡುಗಳನ್ನು ಸಾಗಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗಿಳಿದ ಪಶ್ಚಿಮ ಬಂಗಾಳದ ವಿಶೇಷ ಕಾರ್ಯ ಪಡೆ(ಎಸ್‌ಟಿಎಫ್‌) ಪೊಲೀಸರು, ಕೋಲ್ಕತ್ತದಿಂದ 30 ಕಿ.ಮೀ ದೂರದ ಶಹಾಸನ್‌ ಎಂಬಲ್ಲಿ ಈ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಕೆ.ಜಿ ಸ್ಫೋಟಕಗಳು, ಶಸ್ತ್ರಾಸ್ತ್ರದೊಂದಿಗೆ 20 ಸುತ್ತು ಮದ್ದುಗುಂಡುಗಳು ಹಾಗೂ ₹40ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

’ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇವರ ಹಿಂದೆ ಯಾರಿದ್ದಾರೆ, ಯಾರಿಗಾಗಿ ಈ ಸ್ಪೋಟಗಳನ್ನು ಸಾಗಿಸುತ್ತಿದ್ದರು ಎಂಬುದರ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಇವರಿಗೆ ಅಂತರರಾಜ್ಯ ಅಥವಾ ಅಂತರರಾಷ್ಟ್ರೀಯ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕವಿದೆಯೇ ಎಂಬುದನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಹೇಳಿದರು.

ಕೋಲ್ಕತ್ತದಲ್ಲಿ ಭಾನುವಾರ ಬಂಧಿತರಾಗಿರುವ ಜೆಎಂಬಿ ಭಯೋತ್ಪಾದಕರೊಂದಿಗೆ ಸಂಪರ್ಕವಿರುವುದೆಯೇ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT