ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯಕ್ಕಾಗಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್, ಕಮರಿಗೆ ಬಿದ್ದು ನಾಲ್ವರು ಬಿಎಸ್‌ಎಫ್ ಯೋಧರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30ಕ್ಕೂ ಅಧಿಕ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.