ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಜಮೀನು ವಿವಾದ: ಪೊಲೀಸರ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಹಾನಿ

Published 4 ಏಪ್ರಿಲ್ 2024, 11:37 IST
Last Updated 4 ಏಪ್ರಿಲ್ 2024, 11:37 IST
ಅಕ್ಷರ ಗಾತ್ರ

ಶಹಜಹಾನ್‌ಪುರ (ಉತ್ತರ ಪ್ರದೇಶ): ಗ್ರಾಮಸ್ಥರು ನಡೆಸಿದ ಕಲ್ಲು ತೂರಾಟದಲ್ಲಿ ಮೂವರು ಪೊಲೀಸರು ಗಾಯಗೊಂಡು, ಅವರ ವಾಹನಕ್ಕೆ ಹಾನಿಯಾಗಿರುವ ಘಟನೆ ಉತ್ತರ ಪ್ರದೇಶದ ಅಲ್ಹಾದ್‌ಪುರ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಭೂವ್ಯಾಜ್ಯಕ್ಕೆ ಸಂಬಂಧಿಸಿದ ದೂರಿಗೆ ಸಂಬಂಧಿಸಿದಂತೆ ನಿಗೋಹಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿರುವ ಈ ಗ್ರಾಮಕ್ಕೆ ಪೊಲೀಸರು ಹೋಗಿದ್ದರು. ಆಗ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ (ನಗರ) ತಿಳಿಸಿದ್ದಾರೆ.

ಭೂವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯವೊಂದು ದೂರುದಾರನ ಪರವಾಗಿ ತೀರ್ಪು ನೀಡಿತ್ತು. ಅದಾದ ಬಳಿಕ ಆ ವ್ಯಕ್ತಿಯು ಕಂದಾಯ ಇಲಾಖೆ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿ ವಿವಾದಿತ ಭೂಮಿಯಲ್ಲಿ ಕಲ್ಲುಗಳನ್ನು ಇರಿಸಿದ್ದರು. ಎದುರಾಳಿಗಳು ಈ ಕಲ್ಲುಗಳನ್ನು ತೆಗೆದಿದ್ದರು. ಪೊಲೀಸರು ಸ್ಥಳಕ್ಕೆ ಹೋಗುತ್ತಿದ್ದಂತೆ ಅವರತ್ತ ಕಲ್ಲುಗಳನ್ನು ಎಸೆಯಲು ಆರಂಭಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮಹಿಳೆಯರೂ ಸೇರಿ 14 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT