ಭೋಪಾಲ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯ ಬೈಠಕ್ ಇದೇ 30ರಿಂದ ನವೆಂಬರ್ 1ರವರೆಗೆ ಮೂರು ದಿನಗಳವರೆಗೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆಯಲಿದೆ.

ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೆಯ ಹೊಸಬಾಳೆ ಅವರು ಈ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಭಾಗವತ್ ಅವರು ವಿಜಯದಶಮಿ ಹಬ್ಬದ ದಿನದಂದು ಪ್ರಸ್ತಾಪಿಸಿದ ಮಹತ್ವದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಅಲ್ಲದೆ, ರಾಷ್ಟ್ರಮಟ್ಟದ ಪ್ರಚಲಿತ ವಿಷಯಗಳು ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ ಸಂಘದ ಶತಮಾನೋತ್ಸವ ಕಾರ್ಯಕ್ರಮಗಳ ಸಿದ್ಧತೆಯ ಪರಿಶೀಲನೆಯೂ ಈ ವೇಳೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಸಂಘದ 2025–26ನೇ ಸಾಲಿನ ವಾರ್ಷಿಕ ಯೋಜನೆಯ ಪರಿಶೀಲನೆ, ಸಂಘದ ಕಾರ್ಯಗಳ ಪ್ರಗತಿ ಮತ್ತು ವಿಸ್ತರಣೆ ಕುರಿತೂ ಚರ್ಚೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.