ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: ಕಟ್ಟಡ ಕುಸಿತ, ಮೂವರ ಸಾವು

Published : 2 ಆಗಸ್ಟ್ 2024, 14:21 IST
Last Updated : 2 ಆಗಸ್ಟ್ 2024, 14:21 IST
ಫಾಲೋ ಮಾಡಿ
Comments

ನವದೆಹಲಿ: ವಾಯವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಶುಕ್ರವಾರ ಎರಡು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದು ಬಿದ್ದ ಪ‍ರಿಣಾಮ ಮೂವರು ಮೃತಪಟ್ಟಿದ್ದಾರೆ.

‘ಹಲವಾರು ಜನ ಅವಶೇಷಗಳಡಿ ಸಿಲುಕಿಹಾಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ’ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಗಾರ್ಮೆಂಟ್‌ ಕಾರ್ಖಾನೆಯ ಒಂದು ಭಾಗ ಕುಸಿದುಬಿದ್ದಿದ್ದು, ಈ ವೇಳೆ ಒಳಗಡೆ ದುರಸ್ತಿ ಕಾರ್ಯ ನಡೆಯುತ್ತಿತ್ತು. ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತ‍ಪಟ್ಟರು’ ಎಂದು ಮಾಹಿತಿ ನೀಡಿದ್ದಾರೆ.

‘ಮಧ್ಯಾಹ್ನ 12:51ರ ವೇಳೆಗೆ ಅವಘಡದ ಬಗ್ಗೆ ಮಾಹಿತಿ ದೊರೆತಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಲಾಯಿತು’ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT