ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಮದುವೆ ಮನೆ ಗೋಡೆ ಕುಸಿದು 5 ವರ್ಷದ ಮಗು ಸೇರಿ ಮೂವರ ಸಾವು

Last Updated 22 ಏಪ್ರಿಲ್ 2022, 4:53 IST
ಅಕ್ಷರ ಗಾತ್ರ

ಲಖನೌ:ಸರೋಜಿನಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜ್ನೋರ್ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಮದುವೆ ನಡೆಯುತ್ತಿದ್ದ ಕಟ್ಟಡದ ಬಾಲ್ಕನಿ ಮತ್ತು ಗೋಡೆ ಕುಸಿದು ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದಾರೆ.

ಮೃತರಲ್ಲಿ 5 ವರ್ಷದ ಮಗು ಶ್ರದ್ಧಾ ಕೂಡ ಸೇರಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ 11.30ರ ಸುಮಾರಿಗೆ ಮದುವೆಯ ವಿಧಿವಿಧಾನಗಳು ಮುಗಿದು ಅತಿಥಿಗಳು ಊಟಕ್ಕೆ ಕುಳಿತಿದ್ದಾಗ ಈ ಘಟನೆ ನಡೆದಿದೆ.

'ಇದ್ದಕ್ಕಿದ್ದಂತೆ ಗೋಡೆ ಮತ್ತು ಬಾಲ್ಕನಿ ಕುಸಿದು ಬಿದ್ದಿದ್ದು, ಕೆಲವೇ ನಿಮಿಷಗಳಲ್ಲಿ ಎಲ್ಲವೂ ಮುಗಿದು ಹೋಯಿತು' ಎಂದು ಪ್ರತ್ಯಕ್ಷದರ್ಶಿ ಅನಿಕೇತ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT