ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಕಂದಕಕ್ಕೆ ಉರುಳಿದ ಮಿನಿ ಟ್ರಕ್– ಮೂವರ ಸಾವು

Published 22 ಅಕ್ಟೋಬರ್ 2023, 5:02 IST
Last Updated 22 ಅಕ್ಟೋಬರ್ 2023, 5:02 IST
ಅಕ್ಷರ ಗಾತ್ರ

ಖಾರ್ಗೋನ್(ಮಧ್ಯಪ್ರದೇಶ): ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮಿನಿ ಟ್ರಕ್ 100 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಂಡ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಜಾಮ್‌ಘಾಟ್ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಬ್ಬಿಣದ ಪೈಪ್‌ಗಳು ಮತ್ತು ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಮಿನಿ ಟ್ರಕ್‌ನ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ವಾಹನವು ಆಳವಾದ ಕಂದಕಕ್ಕೆ ಬಿದ್ದಿದೆ ಎಂದು ಮಂಡ್ಲೇಶ್ವರ ಪೊಲೀಸ್ ಠಾಣೆಯ ಪ್ರಭಾರಿ ಇಂದ್ರೇಶ್ ತ್ರಿಪಾಠಿ ತಿಳಿಸಿದ್ದಾರೆ.

ಅಪಘಾತದ ಕುರಿತಂತೆ ಗ್ರಾಮಸ್ಥರ ಮಾಹಿತಿ ಆಧರಿಸಿ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದೆ. ಆದರೆ, ಪೊಲೀಸರು ತಲುಪುವ ಹೊತ್ತಿಗೆ ಟ್ರಕ್‌ನಲ್ಲಿದ್ದ ಮೂವರು ಸಾವಿಗೀಡಾಗಿದ್ದರು ಎಂದು ಅವರು ಹೇಳಿದ್ದಾರೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT