ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢದಲ್ಲಿ ನಕ್ಸಲರ ಹತ್ಯೆ: ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ

Published 3 ಏಪ್ರಿಲ್ 2024, 7:22 IST
Last Updated 3 ಏಪ್ರಿಲ್ 2024, 7:22 IST
ಅಕ್ಷರ ಗಾತ್ರ

ರಾಯಪುರ: ಛತ್ತಿಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೆ ಮೂವರು ನಕ್ಸಲರು ಹತರಾಗಿದ್ದು, ಬುಧವಾರ ಮುಂಜಾನೆ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಇದರೊಂದಿಗೆ ಮಂಗಳವಾರದ ಕಾರ್ಯಾಚರಣೆಯಲ್ಲಿ ಮೃತಪಟ್ಟ ನಕ್ಸಲರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಭದ್ರತಾ ಪಡೆಗಳು ಮಂಗಳವಾರ ಬಂಡುಕೋರರ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಮಹಿಳೆ ಸೇರಿದಂತೆ 10 ನಕ್ಸಲರ ಶವ ಪತ್ತೆಯಾಗಿದ್ದವು. ಶೋಧಕಾರ್ಯ ಮುಂದುವರಿಸಿದ್ದ ಪೊಲೀಸರಿಗೆ ಬುಧವಾರ ಮುಂಜಾನೆ ಮತ್ತೆ ಮೂವರು ನಕ್ಸಲರ ಶವ ಸಿಕ್ಕಿದೆ. 

‘ಮೃತ ನಕ್ಸಲರ ಗುರುತು ಪತ್ತೆಯಾಗಿಲ್ಲ. ಆದರೆ, ಪ್ರಾಥಮಿಕ ಮಾಹಿತಿಗಳ ಪ್ರಕಾರ ಅವರು ‘ಪೀಪಲ್ಸ್‌ ಲಿಬರೇಷನ್‌ ಗೆರಿಲ್ಲಾ ಆರ್ಮಿ’ ಎಂಬ ಬಂಡುಕೋರ ಸಂಘಟನೆಗೆ ಸೇರಿದವರೆಂದು ತಿಳಿದುಬಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT