ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಹಾಪುರ | ಖಾಸಗಿ ಬಸ್‌ ಪಲ್ಟಿ ಒಂದೇ ಕುಟುಂಬದ ಮೂವರು ಸಾವು, 9 ಮಂದಿಗೆ ಗಾಯ

Published 23 ನವೆಂಬರ್ 2023, 6:46 IST
Last Updated 23 ನವೆಂಬರ್ 2023, 6:46 IST
ಅಕ್ಷರ ಗಾತ್ರ

ಪುಣೆ: ಖಾಸಗಿ ಬಸ್‌ವೊಂದು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದ ಬಳಿ ನಡೆದಿದೆ.

ಸುಮಾರು 25 ಪ್ರಯಾಣಿಕರನ್ನು ಹೊತ್ತ ಸ್ಲೀಪರ್‌ ಕೋಚ್‌ ಬಸ್‌ ಗೋವಾದಿಂದ ಮುಂಬೈಗೆ ತೆರಳುತ್ತಿತ್ತು. ಕೊಲ್ಹಾಪುರ ನಗರದ ಹೊರವಲಯದಲ್ಲಿರುವ ಪುಯಿಖಾಡಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕೊಲ್ಹಾಪುರ–ರಾಧನಗರಿ ರಸ್ತೆಯ ಪುಯಿಖಾಡಿ ಬಳಿ ಬಸ್‌ ಚಾಲಕ ತಿರುವು ತೆಗೆದುಕೊಳ್ಳುವ ವೇಳೆ, ಬಸ್‌ ಪಲ್ಟಿಯಾಗಿದೆ. ಪರಿಣಾಮ, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಒಂಬತ್ತು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಲ್ಹಾಪುರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಾರ್ವಿರ್‌ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT