ಶ್ರೀನಗರ: ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಉತ್ತರ ಕಾಶ್ಮೀರದ ಕ್ರೀರಿ ಪ್ರದೇಶದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತರಾದ ಭಯೋತ್ಪಾದಕರು ಶ್ರೀನಗರಕ್ಕೆ ಬಂದು ಭಯೋತ್ಪಾದನಾ ಕೃತ್ಯವೆಸಗುತ್ತಿದ್ದರು. ಹೀಗಾಗಿ ಈ ಮೂವರ ಹತ್ಯೆಯು ಬಹುದೊಡ್ಡ ಯಶಸ್ವಿ ಕಾರ್ಯಾಚರಣೆಯಾಗಿದೆ. ಗುಲ್ಮಾರ್ಗ್ ಗುಡ್ಡಗಾಡು ಪ್ರದೇಶದಲ್ಲಿ ಕಳೆದ 3-4 ತಿಂಗಳಿಂದ ಉಗ್ರರು ಚಟುವಟಿಕೆಗಳು ಸಕ್ರಿಯವಾಗಿವೆ. ಅಲ್ಲದೆ, ಉಗ್ರರನ್ನು ಸದೆಬಡೆಯುವ ಯತ್ನಗಳು ಮುಂದುವರಿದಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.