ಇಂಫಾಲ: ಮಣಿಪುರದ ತೌಬಾಲ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಂಡಿನದಾಳಿ ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಈ ಘಟನೆಯ ಹಿಂದೆಯೇ ರಾಜ್ಯದ ಐದು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಿದವರ ಗುರುತು ಪತ್ತೆಯಾಗಿಲ್ಲ. ಗುರುತು ಸಿಗದಂತೆ ವೇಷ ಧರಿಸಿದ್ದ ಅಪರಿಚಿತರು ಲಿಲಾಂಗ್ ಚಿಗ್ಜಾವೊ ವಲಯದಲ್ಲಿ ಬಂದು ಸ್ಥಳೀಯರನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂದು ತಿಳಿಸಿವೆ.

ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಇತರೆ ಐವರು ಗಾಯಗೊಂಡರು. ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವಾಹನಗಳು ಯಾರಿಗೆ ಸೇರಿದ್ದವು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ.

ತೌಬಲ್, ಇಂಫಾಲ ಪೂರ್ವ,ಇಂಫಾಲ ಪಶ್ಚಿ, ಕಾಕ್ಚಿಂಗ್, ಭಿಷ್ಣುಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.