ಕಾನ್ಪುರ: ‘ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ, ಎಂಟು ಮಂದಿ ಪೊಲೀಸರ ಹತ್ಯೆಯ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಸಬ್ ಇನ್ಸ್ಪೆಕ್ಟರ್ ಹಾಗೂ ಒಬ್ಬ ಕಾನ್ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಎಸ್ಎಸ್ಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ.

‘ಚೌಬೆಪುರ ಪೊಲೀಸ್ ಠಾಣೆಯ ಅಮಾನತುಗೊಂಡಿರುವ ಈ ಸಿಬ್ಬಂದಿ ವಿರುದ್ಧ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ಘಟನೆಯಲ್ಲಿ ಇವರ ಕೈವಾಡವಿರುವುದು ಸಾಬೀತಾದರೆ ಕಠಿಣ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ಬಹುಮಾನ ಹೆಚ್ಚಳ: ಎಂಟು ಮಂದಿ ಪೊಲೀಸರ ಹತ್ಯೆಯ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಿದವರಿಗೆ ನೀಡುವ ಬಹುಮಾನದ ಮೊತ್ತವನ್ನು ₹2.50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಡಿಜಿಪಿ ಎಚ್.ಸಿ. ಅವಸ್ಥಿ ಹೇಳಿದ್ದಾರೆ. ಈ ಹಿಂದೆ ₹1ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.