ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೆಇಎಂನ ಮೂವರು ಶಂಕಿತ ಉಗ್ರರು ಹತ

Published 26 ಜೂನ್ 2024, 16:21 IST
Last Updated 26 ಜೂನ್ 2024, 16:21 IST
ಅಕ್ಷರ ಗಾತ್ರ

ಭದೇರ್ವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಆರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಜೈಷ್‌–ಎ– ಮೊಹಮ್ಮದ್‌ (ಜೆಇಎಂ) ಸಂಘಟನೆಯ ಮೂವರು ಶಂಕಿತ ಭಯೋತ್ಪಾದಕರು ಹತರಾಗಿದ್ದಾರೆ.

ಗಂಡೊಹ್‌ ಪ್ರದೇಶದ ಬಜಾದ್‌ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್‌ ಪಡೆ ಜಂಟಿಯಾಗಿ ಶೋಧ ಕಾರ್ಯ ಕೈಗೊಂಡಿದ್ದವು.

ಜೂನ್‌ 11 ಮತ್ತು 12ರಂದು ಬೆಟ್ಟ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯ ಬಳಿಕ ಭದ್ರತಾ ಪಡೆಗಳು ಅವರ ಶೋಧಕ್ಕೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಗಂಡೊಹ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂಟರ್ನೆಟ್‌ ಮೊಬೈಲ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಈ ನಡುವೆ, ರಾಜೌರಿ ಜಿಲ್ಲೆಯ ಚಿಂಗಸ್‌ ಪ್ರದೇಶದ ಪಿಂಡ್‌ ಗ್ರಾಮದಲ್ಲಿ ಚೀನಾದ ಹ್ಯಾಂಡ್‌ ಗ್ರೆನೇಡ್‌ ಪತ್ತೆಯಾಗಿದೆ. ಅಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳಿಗೆ ಅದು ದೊರೆತಿದೆ ಎಂದು ಅವರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT